Advertisement
ಸುದ್ದಿಗಳು

ಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು

Share

ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.…..ಮುಂದೆ ಓದಿ….

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು,” ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ ನೀತಿಯ ಮತ್ತೊಂದು ಪ್ರಮುಖ ಕೊಡುಗೆಯಾಗಿದೆ. ಈ ಯೋಜನೆಯಡಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಬಡ ಕುಟುಂಬಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವುದಕ್ಕೆ ಸುಲಭ ಹಾಗೂ ತ್ವರಿತಗತಿಯಲ್ಲಿ ಹಣಕಾಸಿನ ನೆರವು ಲಭ್ಯವಾಗಲಿದೆ. ಆ ಮೂಲಕ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯು ಪ್ರತಿವರ್ಷವೂ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸುವುದರಲ್ಲಿ ಅನುಮಾನವೇ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಡಿ ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ 7.5 ಲಕ್ಷ ರೂ. ವರೆಗೆ ಬ್ಯಾಂಕ್‌ಗಳಿಂದ ಯಾವುದೇ ಭದ್ರತೆಯಿಲ್ಲದೆ(ಕೊಲಾಟರಲ್‌ ರಹಿತ) ಸಾಲ ನೀಡಲಾಗುತ್ತದೆ. ಈ ಸಾಲದ ಶೇ.75ರಷ್ಟು ಮೊತ್ತಕ್ಕೆ ಸರ್ಕಾರವೇ ಬ್ಯಾಂಕ್‌ಗಳಿಗೆ ಖಾತರಿ ನೀಡಲಿದೆ. ಅಲ್ಲದೆ 8 ಲಕ್ಷ ರೂ.ಗಿಂತ ಅಧಿಕ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ.ವರೆಗೆ ಸಾಲ ನೀಡಲಿದ್ದು, ಅದಕ್ಕೆ ಶೇ.3ರಷ್ಟು ಬಡ್ಡಿ ವಿನಾಯಿತಿ ಕೂಡ ದೊರೆಯಲಿದೆ. ಶೀಘ್ರದಲ್ಲೇ ದೇಶದೆಲ್ಲೆಡೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ಅರ್ಹ ವಿದ್ಯಾರ್ಥಿಗಳು ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಹೊಸ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಯಾ. ಚೌಟ ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

12 minutes ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

9 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

11 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

17 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

18 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

19 hours ago