ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ | ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ

November 9, 2024
7:33 AM

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು.  ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror