ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…
ಎಳೆಯ ಹಲಸಿನ ಕಾಯಿ ಪಕೋಡ(Tender Jack Fruit)ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ಹವಾಮಾನ ಮತ್ತು ಮಳೆಮಾಪನ ಕೇಂದ್ರಗಳನ್ನು ಅಳವಡಿಸಿದರೆ ಬೆಳೆಗಳಿಗೆ…
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…