ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.
ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.
ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.