Advertisement
ಸುದ್ದಿಗಳು

ಹರಿಹರಪಲ್ಲತ್ತಡ್ಕ | ತಲವಾರು ವದಂತಿ | ಪೊಲೀಸರ ಕಾರ್ಯಾಚರಣೆ | ಗ್ರಾಮೀಣ ಭಾಗದಲ್ಲಿ ವದಂತಿಗಳ ಕಾರುಬಾರು |

Share

ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.

ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು  ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.

ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

7 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

7 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

7 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

7 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

7 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago