Advertisement
Uncategorized

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

Share

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ ಕಂಡುಬರುವ ಹೆಚ್ಚಿನ ಸಮುದ್ರ ಕಸಕ್ಕೆ ಇದು ಕಾರಣವಾಗಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಹೇಳಿದೆ. ತೆಳುವಾದ, ಏಕ-ಬಳಕೆಯ ಚೀಲಗಳು ಪ್ರಾಣಿಗಳು ಸಿಕ್ಕಿಹಾಕಿಕೊಂಡಾಗ ಅಥವಾ ಪ್ಲಾಸ್ಟಿಕ್ ಅನ್ನು ಸೇವಿಸಿದಾಗ ಜಲಚರಗಳಿಗೆ ಹಾನಿ ಮಾಡುತ್ತವೆ ಮತ್ತು ಅವುಗಳ ಸಾವಿಗೆ ಕಾರಣವಾಗುತ್ತದೆ  ಎಂದು ವಿಶ್ವಸಂಸ್ಥೆ ಹೇಳುತ್ತದೆ.

ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ದಂಡ ವಿಧಿಸುವುದು ಈ ಸಮಸ್ಯೆಯನ್ನು ನಿವಾರಿಸಲು ಕ್ರಮವಾಗುತ್ತಿದೆ.ಈ ಮೂಲಕ  ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವುದು ಮತ್ತು ನೀರನ್ನು ತಲಪುವುದನ್ನು ತಡೆಯುವ ಗುರಿ ಇಲ್ಲಿ ಹೊಂದಲಾಗಿದೆ. ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಈ ನೀತಿಗಳು ವ್ಯಾಪಕವಾಗಿ ಪರಿಣಾಮಕಾರಿಯಾಗಿವೆ ಎಂದು ಹೇಳಿದೆ.

ಪ್ಲಾಸ್ಟಿಕ್ ಚೀಲಗಳ ನಿಷೇಧ ಮತ್ತು ತೆರಿಗೆಗಳ ಪರಿಣಾಮಗಳ ಬಗ್ಗೆ ನಿರ್ಣಯಿಸಲು ಸಂಶೋಧಕರು 45,000 ಕ್ಕೂ ಹೆಚ್ಚು ತೀರ ಪ್ರದೇಶಗಳ ಶುಚಿಗೊಳಿಸುವಿಕೆಯಿಂದ ರಾಷ್ಟ್ರವ್ಯಾಪಿ ಡೇಟಾಗಳನ್ನು ಪರಿಶೀಲಿಸಿದರು. ಅವರು 2017 ಮತ್ತು 2023 ರ ನಡುವೆ ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಜಾರಿಗೆ ತಂದ ನೂರಾರು ರಾಜ್ಯ ಮತ್ತು ಸ್ಥಳೀಯ ಪ್ಲಾಸ್ಟಿಕ್ ನೀತಿಗಳನ್ನು ಗಮನಿಸಿದರು. ಈ ಮಾದರಿಗಳನ್ನು  ಇತರ ಪ್ರದೇಶಗಳಿಗೆ ಹೋಲಿಸಿದರು. ಪ್ಲಾಸ್ಟಿಕ್ ಚೀಲಗಳ ನೀತಿಗಳು – ಪಾಲಿಸಿಗಳು ಇಲ್ಲದ ಪ್ರದೇಶಗಳಿಗೆ ಹೋಲಿಸಿದರೆ ಸಂಗ್ರಹಿಸಿದ ಒಟ್ಟು ವಸ್ತುಗಳ ಪ್ರಮಾಣದಲ್ಲಿ ಪ್ಲಾಸ್ಟಿಕ್ ಚೀಲಗಳ ಪಾಲು 25% ರಿಂದ 47% ರಷ್ಟು ಕಡಿಮೆಯಾಗಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಪ್ಲಾಸ್ಟಿಕ್ ಚೀಲಗಳ ಮೇಲಿನ ನೀತಿಗಳೇ ಪ್ಲಾಸ್ಟಿಕ್‌ ನಿಯಂತ್ರಣ ಮಾಡಲು ಪರಿಣಾಮಕಾರಿ ಎಂಬುದಕ್ಕೆ ಪುರಾವೆಗಳಿವೆ.ಹೀಗಾಗಿ ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ಸರಿಯಾದ ನೀತಿ ನಿಯಮಗಳೇ ಅಗತ್ಯವಾಗಿದೆ.ಪರಿಸರ ಉಳಿವಿನ ದೃಷ್ಟಿಯಿಂದ ಇಂತಹದ್ದೊಂದು ನೀತಿಗಳ ಅಗತ್ಯ ಇದೆ ಎನ್ನುವುದು ವರದಿಯ ಫಲಿತಾಂಶ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

8 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago