ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳು ಸಾವು

Advertisement
Advertisement

ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ ಘಟನೆಯೊಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡೆಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

Advertisement

ವಡೆಘಟ್ಟ ಗ್ರಾಮದ ಕೆರೆಗೆ ವಿಷ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಜೋಡಿ ಹೊಸಹಳ್ಳಿ ಗ್ರಾಮ‌ ಪಂಚಾಯ್ತಿ ಸದಸ್ಯ ಚಂದನ್ ಎಂಬವರು ಮೀನು ಸಾಕಾಣಿಕೆ ಮಾಡಲು ಕೆರೆಯನ್ನು ಗುತ್ತಿಗೆ ಪಡೆದಿದ್ದರು.

Advertisement
Advertisement

ಕಳೆದ ಎರಡು ತಿಂಗಳ ಹಿಂದೆ ಬರೋಬ್ಬರಿ ಐದುವರೆ ಲಕ್ಷ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟಿದ್ದರು. ಹಗಲು ರಾತ್ರಿ ನಿದ್ದೆಗೆಟ್ಟು ಮೀನುಗಳನ್ನು ಸಾಕಿದರು. ಆದರೆ, ರಾಜಕೀಯ ದ್ವೇಷಕ್ಕೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ವಿಕೃತಿ ಮೆರೆದಿದ್ದಾರೆ.

ಕೆರೆಗೆ ವಿಷ ಮಿಶ್ರಣವಾದ ಹಿನ್ನೆಲೆ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳೆಲ್ಲ ಸಾವನ್ನಪ್ಪಿವೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

Advertisement
Advertisement

ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿ ಲಕ್ಷಾಂತರ ಮೀನುಗಳು ಸಾವು"

Leave a comment

Your email address will not be published.


*