ರಾಜಕೀಯ ದ್ವೇಷಕ್ಕೆ ಕೆರೆಗೆ ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ ಘಟನೆಯೊಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ವಡೆಘಟ್ಟ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ವಡೆಘಟ್ಟ ಗ್ರಾಮದ ಕೆರೆಗೆ ವಿಷ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಜೋಡಿ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಚಂದನ್ ಎಂಬವರು ಮೀನು ಸಾಕಾಣಿಕೆ ಮಾಡಲು ಕೆರೆಯನ್ನು ಗುತ್ತಿಗೆ ಪಡೆದಿದ್ದರು.
ಕಳೆದ ಎರಡು ತಿಂಗಳ ಹಿಂದೆ ಬರೋಬ್ಬರಿ ಐದುವರೆ ಲಕ್ಷ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟಿದ್ದರು. ಹಗಲು ರಾತ್ರಿ ನಿದ್ದೆಗೆಟ್ಟು ಮೀನುಗಳನ್ನು ಸಾಕಿದರು. ಆದರೆ, ರಾಜಕೀಯ ದ್ವೇಷಕ್ಕೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ವಿಕೃತಿ ಮೆರೆದಿದ್ದಾರೆ.
ಕೆರೆಗೆ ವಿಷ ಮಿಶ್ರಣವಾದ ಹಿನ್ನೆಲೆ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳೆಲ್ಲ ಸಾವನ್ನಪ್ಪಿವೆ. ಭಾನುವಾರ ಬೆಳಗ್ಗೆ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…