ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.
ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.
ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.
ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…