ಕರ್ನಾಟಕ ನೂತನ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕ ಸಚಿವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ರಾಜ್ಯದ ಜನತೆಗೆ ನಾವು ಕೊಟ್ಟ ಮಾತನ್ನು ಈಡೇರಿಸಿಕೊಳ್ಳುವ ಸಮಯ ಬಂದಿದೆ. ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ, ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ, ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಯುವನಿಧಿ ಪದವೀಧರರಿಗೆ 3,000 ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel