ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು.ಇಲ್ಲದಿದ್ದರೆ ಅವರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಹರೀಶ್ ಕುಮಾರ್ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೇ 22 ರಂದು ವಿಜಯೋತ್ಸವ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಪಕ್ಷ ಕಾನೂನಾತ್ಮಕವಾಗಿ ಚರ್ಚಿಸಿದೆ. ಪ್ರಥಮವಾಗಿ ಠಾಣೆಗಳಲ್ಲಿ ಪ್ರಕರಣ ದಾಖಲಿಸುವ ಕೆಲಸ ನಡೆಯುತ್ತದೆ. ಹರೀಶ್ ಪೂಂಜಾ ಕ್ಷಮೆ ಯಾಚಿಸದಿದ್ದರೆ, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಮಾನ ನಷ್ಠ ಮೊಕದ್ದಮೆ ದಾಖಲಿಸಲಾಗುವುದು ಎ೦ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.