ಐದು ಗ್ಯಾರಂಟಿಗಳಲ್ಲೊಂದಾದ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಗೆ ಮಾಸಿಕ 1955 ಕೋಟಿ ರು.ನಂತೆ ವಾರ್ಷಿಕ ಅಂದಾಜು 23,400 ಕೋಟಿ ರು. ಅನುದಾನ ಅಗತ್ಯವಿದೆ ಎಂಬ ಮಾಹಿತಿಯನ್ನು ವರದಿಯಲ್ಲಿ ತಿಳಿಸಿದೆ. ಇದರೊಂದಿಗೆ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೇ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗಲಿದೆ. ಐದೂ ಗ್ಯಾರಂಟಿಗಳ ಜಾರಿಗೆ 50 ಸಾವಿರ ರು. ಕೋಟಿ ರು. ಅಂದಾಜಿಸಿರುವ ಸರ್ಕಾರಕ್ಕೆ ಇದರ ಅರ್ಧದಷ್ಟುಅನುದಾನ ಗೃಹಜ್ಯೋತಿ ಒಂದೇ ಯೋಜನೆಗೆ ಬೇಕಾಗುತ್ತದೆ.
ಮುಖ್ಯಮಂತ್ರಿಗಳ ಸೂಚನೆಯಂತೆ ಇಂಧನ ಇಲಾಖೆಯು ಬೆಸ್ಕಾಂ, ಚೆಸ್ಕಾಂ ಸೇರಿದಂತೆ ತನ್ನೆಲ್ಲಾ ವಿದ್ಯುತ್ ಸರಬರಾಜು ನಿಗಮಗಳಿಂದ ಮಾಸಿಕ 200 ಯುನಿಟ್‌ನೊಳಗೆ ವಿದ್ಯುತ್ ಬಳಕೆದಾರರ ಮಾಹಿತಿ ಸಂಗ್ರಹಿಸಿದೆ. ಆ ಪ್ರಕಾರ, ರಾಜ್ಯದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ 86 ಲಕ್ಷ, ಚೆಸ್ಕಾಂನಡಿ 20 ಲಕ್ಷ, ಮೆಸ್ಕಾಂ ವ್ಯಾಪ್ತಿಯಲ್ಲಿ 15 ಲಕ್ಷ, ಹೆಸ್ಕಾಂ ವ್ಯಾಪ್ತಿಯಲ್ಲಿ 28 ಲಕ್ಷ ಹಾಗೂ ಜೆಸ್ಕಾ ಅಡಿ 19 ಲಕ್ಷ ಸಂಪರ್ಕಗಳು ಸೇರಿ ಒಟ್ಟಾರೆ ಎಲ್ಲಾ ನಿಗಮಗಳ ಅಡಿ 1.70 ಕೋಟಿ ವಿದ್ಯುತ್ ಸಂಪರ್ಕಗಳಿದ್ದು, ಈ ಪೈಕಿ 1.20 ಕೋಟಿಯಷ್ಟು ಬಳಕೆದಾರರು 200 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆದಾರರಾಗಿದ್ದಾರೆ.
ಇವರೆಲ್ಲರಿಗೂ ಗೃಹಜ್ಯೋತಿ ಯೋಜನೆ ಜಾರಿಗೆ ಮಾಸಿಕ 1955 ಕೋಟಿ ರು.ನಂತೆ 23,400 ಕೋಟಿ ರು.ಗಳಷ್ಟುಅನುದಾನ ಬೇಕೆಂದು ತಿಳಿಸಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಗೃಹ ಬಳಕೆ ವಿದ್ಯುತ್‌ಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೇರೆ ಬೇರೆ ರೀತಿಯ ದರ ನಿಗದಿಪಡಿಸಲಾಗಿದೆ. ಆ ಪ್ರಕಾರ ಗೃಹಜ್ಯೋತಿ ಯೋಜನೆ ಜಾರಿಯಿಂದ ಮಾಸಿಕ ಗರಿಷ್ಠ 200 ಯುನಿಟ್‌ವರೆಗೆ ವಿದ್ಯುತ್ ಬಳಸುವ ಫಲಾನುಭವಿಗೆ ಗ್ರಾಮೀಣ ಭಾಗದಲ್ಲಿ 1000 ರು., ನಗರ ಪ್ರದೇಶದಲ್ಲಿ 1200 ರು. ನಷ್ಟುಉಳಿತಾಯವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…