ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಕರ್ನಾಟಕ 60,000-65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
20 ಕ್ಕೂ ಹೆಚ್ಚು ಕಂಪನಿಗಳು ಹಸಿರು ಇಂಧನ ತಂತ್ರಜ್ಞಾನಗಳು, ಹಾರ್ಡ್‌ವೇರ್ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿವೆ ಎಂದು ಬೊಮ್ಮಾಯಿ ತಮ್ಮ ನಾಲ್ಕು ದಿನಗಳ ದಾವೋಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ತಂತ್ರಜ್ಞಾನದ ನೆಲೆ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯದಿಂದ ಆಕರ್ಷಿತವಾದ ಹೂಡಿಕೆಗಳನ್ನು ಪಟ್ಟಿ ಮಾಡಿದರು. ‘ಹೊಸ ತಂತ್ರಜ್ಞಾನಗಳ ಮೇಲೆ ಹೂಡಿಕೆಯನ್ನು ಕರ್ನಾಟಕದಲ್ಲಿ ಮಾತ್ರ ಮಾಡಲು ಸಾಧ್ಯ ಎಂದು ಉದ್ಯಮಿಗಳು ಭಾವಿಸುತ್ತಾರೆ’ ಎಂದು ಸಿಎಂ ಹೇಳಿದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…