ಕೋವಿಡ್‍ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿಗಳ ಸಂವಾದ | ಮಕ್ಕಳಿಗೆ ನೆರವಾದ ಪಿ ಎಂ ಕೇರ್‌ |

May 30, 2022
7:54 PM

ಕೋವಿಡ್ ಸಮಯದಲ್ಲಿ ಅನಾಥರಾದ ಶಾಲೆಗೆ ಹೋಗುವ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು  ಪಿಎಂ ಕೇರ್ಸ್ ಯೋಜನೆಯಡಿ ನೆರವನ್ನು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ನವದೆಹಲಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳೊಂದಿಗೆ ಸಂವಾದ ನಡೆಸಿದರು.

Advertisement
Advertisement
Advertisement

Advertisement

ಮಕ್ಕಳಿಗಾಗಿ PM CARES ನ ಪಾಸ್‌ಬುಕ್ ಮತ್ತು ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ಕಾರ್ಡ್ ಅನ್ನು ಕಾರ್ಯಕ್ರಮದ ಸಮಯದಲ್ಲಿ ಮಕ್ಕಳಿಗೆ ಹಸ್ತಾಂತರಿಸಲಾಯಿತು. ಸರ್ಕಾರವು ಇತ್ತೀಚಿಗೆ pmcaresforchildren.in ಪೋರ್ಟಲ್  ಕೂಡಾ ಪ್ರಾರಂಭಿಸಿದೆ. ಕೊರೋನಾ ಸಮಯದಲ್ಲಿ ಅನಾಥರಾದ ಮಕ್ಕಳನ್ನು ಇಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು. 23 ವರ್ಷ ತುಂಬಿದ ನಂತರ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವಿನೊಂದಿಗೆ ಮಕ್ಕಳಿಗೆ ವಸತಿ ಮತ್ತು ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಮೂಲಕ ಅವರನ್ನು ಸಬಲೀಕರಣಗೊಳಿಸುವುದು, ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆಯು ಯೋಜನೆಯ ಉದ್ದೇಶವಾಗಿದೆ.

Advertisement

ಸೋಮವಾರ ನವದೆಹಲಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ  ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಹೆತ್ತವರ ಪ್ರೀತಿ, ಕಾಳಜಿ ಯಾರೂ ನೀಡಲು ಸಾಧ್ಯವಿಲ್ಲ ಆದರೂ ತಾಯಿ ಭಾರತಿ ನಿಮ್ಮೊಂದಿಗಿದ್ದಾಳೆ, ಪಿ.ಎಂ. ಕೆರ್ಸ್ ಯೋಜನೆ ಮೂಲಕ ಕೇಂದ್ರ ಸರ್ಕಾರ ನಿಮ್ಮೆಲ್ಲರ ಹಿತಾಸಕ್ತಿ ಕಾಯಲು ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ  ಹೇಳಿದರು.

Advertisement

ಈಗಾಗಲೆ ಮಕ್ಕಳ ಮನೆ ಹತ್ತಿರವಿರುವ ಸರ್ಕಾರಿ ಅಥವಾ ಖಾಸಗಿ ಶಾಲೆಗೆ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಶಿಕ್ಷಣಕ್ಕೆ ಬೇಕಾದ ಪುಸ್ತಕ, ಬಟ್ಟೆ ಇನ್ನಿತರ ಖರ್ಚು ಸಹ ಸರ್ಕಾರ ನೋಡಿಕೊಳ್ಳಲಿದೆ. ಉನ್ನತ ಶಿಕ್ಷಣದ ಜೊತೆಗೆ ಶೈಕ್ಷಣಿಕ ಸಾಲಕ್ಕೂ ಪಿ.ಎಂ.ಕೇರ್ಸ್ ನೆರವಾಗಲಿದೆ. 5 ಲಕ್ಷ ರೂ. ವೆರೆಗಿನ ಉಚಿತ ಚಿಕಿತ್ಸೆಯ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಮಕ್ಕಳ ಹೆಸರ ಮೇಲೆ ಅಂಚೆ ಬ್ಯಾಂಕ್‍ನಲ್ಲಿ ಇಡಲಾಗುವ ಇಡಗಂಟಿನ ಮೇಲೆ ಲಭ್ಯವಾಗುವ ಬಡ್ಡಿಯನ್ನು 18 ರಿಂದ 23 ವಯಸ್ಸಿನ ಅವಧಿಯಲ್ಲಿ ಪ್ರತಿ ತಿಂಗಳ ಸ್ಟೇಫಂಡ್ ರೂಪದಲ್ಲಿ ಖರ್ಚಿಗೆ ಹಣ ನೀಡಲಾಗುವುದು. 23 ವರ್ಷದ ನಂತರ ಮುಂದಿನ ಭವಿಷ್ಯಕ್ಕೆ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇದಲ್ಲದೆ ಸ್ಪಾನ್ಸರ್ ಶಿಪ್ ಯೋಜನೆಯಡಿ 2000 ರೂ. ಆರ್ಥಿಕ ಸೌಲಭ್ಯ 2021-22ನೇ ಸಾಲಿನಿಂದ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳಿಗೆ ಗರಿಷ್ಠ 3 ವರ್ಷ ಅಥವಾ 18 ವರ್ಷದ ವರೆಗೆ ಇದು ಸಿಗಲಿದೆ ಎಂದು ಪಿ.ಎಂ.ಕೇರ್ ಯೋಜನೆಗಳ ಕುರಿತು ‌ಪ್ರಧಾನಿಗಳು ವಿವರಿಸಿದರು.

ದಕ್ಷಿಣ ಕನ್ನಡ  ಜಿಲ್ಲೆಯ 11 ಮಕ್ಕಳು ಭಾಗವಹಿಸಿದ್ದರು. ಸಂವಾದದ ಬಳಿಕ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು 10 ಲಕ್ಷ ರೂ.ಗಳ ಅಂಚೆ ಇಲಾಖೆ ಪಾಸ್ ಬುಕ್, ಮಕ್ಕಳಿಗೆ ಪ್ರಧಾನ ಮಂತ್ರಿಗಳು ಬರೆದ ಸ್ನೇಹ ಪತ್ರ, ಆಯುಷ್ಮಾನ್ ಆರೋಗ್ಯ ಕಾರ್ಡ್ ಒಳಗೊಂಡ ಕಿಟ್ ವಿತರಿಸಿದರು.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror