ಕೋವಿಡ್ ಸಮಯದಲ್ಲಿ ಅನಾಥರಾದ ಶಾಲೆಗೆ ಹೋಗುವ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್ ಯೋಜನೆಯಡಿ ನೆರವನ್ನು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ನವದೆಹಲಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಕೋವಿಡ್-19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಮಕ್ಕಳಿಗಾಗಿ PM CARES ನ ಪಾಸ್‌ಬುಕ್ ಮತ್ತು ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ಕಾರ್ಡ್ ಅನ್ನು ಕಾರ್ಯಕ್ರಮದ ಸಮಯದಲ್ಲಿ ಮಕ್ಕಳಿಗೆ ಹಸ್ತಾಂತರಿಸಲಾಯಿತು. ಸರ್ಕಾರವು ಇತ್ತೀಚಿಗೆ pmcaresforchildren.in ಪೋರ್ಟಲ್ ಕೂಡಾ ಪ್ರಾರಂಭಿಸಿದೆ. ಕೊರೋನಾ ಸಮಯದಲ್ಲಿ ಅನಾಥರಾದ ಮಕ್ಕಳನ್ನು ಇಲ್ಲಿ ನೋಂದಾಯಿಸಿಕೊಳ್ಳಲಾಗಿತ್ತು. 23 ವರ್ಷ ತುಂಬಿದ ನಂತರ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವಿನೊಂದಿಗೆ ಮಕ್ಕಳಿಗೆ ವಸತಿ ಮತ್ತು ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಮೂಲಕ ಅವರನ್ನು ಸಬಲೀಕರಣಗೊಳಿಸುವುದು, ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆಯು ಯೋಜನೆಯ ಉದ್ದೇಶವಾಗಿದೆ.
ಸೋಮವಾರ ನವದೆಹಲಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಹೆತ್ತವರ ಪ್ರೀತಿ, ಕಾಳಜಿ ಯಾರೂ ನೀಡಲು ಸಾಧ್ಯವಿಲ್ಲ ಆದರೂ ತಾಯಿ ಭಾರತಿ ನಿಮ್ಮೊಂದಿಗಿದ್ದಾಳೆ, ಪಿ.ಎಂ. ಕೆರ್ಸ್ ಯೋಜನೆ ಮೂಲಕ ಕೇಂದ್ರ ಸರ್ಕಾರ ನಿಮ್ಮೆಲ್ಲರ ಹಿತಾಸಕ್ತಿ ಕಾಯಲು ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಈಗಾಗಲೆ ಮಕ್ಕಳ ಮನೆ ಹತ್ತಿರವಿರುವ ಸರ್ಕಾರಿ ಅಥವಾ ಖಾಸಗಿ ಶಾಲೆಗೆ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಶಿಕ್ಷಣಕ್ಕೆ ಬೇಕಾದ ಪುಸ್ತಕ, ಬಟ್ಟೆ ಇನ್ನಿತರ ಖರ್ಚು ಸಹ ಸರ್ಕಾರ ನೋಡಿಕೊಳ್ಳಲಿದೆ. ಉನ್ನತ ಶಿಕ್ಷಣದ ಜೊತೆಗೆ ಶೈಕ್ಷಣಿಕ ಸಾಲಕ್ಕೂ ಪಿ.ಎಂ.ಕೇರ್ಸ್ ನೆರವಾಗಲಿದೆ. 5 ಲಕ್ಷ ರೂ. ವೆರೆಗಿನ ಉಚಿತ ಚಿಕಿತ್ಸೆಯ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡಲಾಗುತ್ತಿದೆ. ಮಕ್ಕಳ ಹೆಸರ ಮೇಲೆ ಅಂಚೆ ಬ್ಯಾಂಕ್‍ನಲ್ಲಿ ಇಡಲಾಗುವ ಇಡಗಂಟಿನ ಮೇಲೆ ಲಭ್ಯವಾಗುವ ಬಡ್ಡಿಯನ್ನು 18 ರಿಂದ 23 ವಯಸ್ಸಿನ ಅವಧಿಯಲ್ಲಿ ಪ್ರತಿ ತಿಂಗಳ ಸ್ಟೇಫಂಡ್ ರೂಪದಲ್ಲಿ ಖರ್ಚಿಗೆ ಹಣ ನೀಡಲಾಗುವುದು. 23 ವರ್ಷದ ನಂತರ ಮುಂದಿನ ಭವಿಷ್ಯಕ್ಕೆ 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇದಲ್ಲದೆ ಸ್ಪಾನ್ಸರ್ ಶಿಪ್ ಯೋಜನೆಯಡಿ 2000 ರೂ. ಆರ್ಥಿಕ ಸೌಲಭ್ಯ 2021-22ನೇ ಸಾಲಿನಿಂದ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳಿಗೆ ಗರಿಷ್ಠ 3 ವರ್ಷ ಅಥವಾ 18 ವರ್ಷದ ವರೆಗೆ ಇದು ಸಿಗಲಿದೆ ಎಂದು ಪಿ.ಎಂ.ಕೇರ್ ಯೋಜನೆಗಳ ಕುರಿತು ಪ್ರಧಾನಿಗಳು ವಿವರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ 11 ಮಕ್ಕಳು ಭಾಗವಹಿಸಿದ್ದರು. ಸಂವಾದದ ಬಳಿಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು 10 ಲಕ್ಷ ರೂ.ಗಳ ಅಂಚೆ ಇಲಾಖೆ ಪಾಸ್ ಬುಕ್, ಮಕ್ಕಳಿಗೆ ಪ್ರಧಾನ ಮಂತ್ರಿಗಳು ಬರೆದ ಸ್ನೇಹ ಪತ್ರ, ಆಯುಷ್ಮಾನ್ ಆರೋಗ್ಯ ಕಾರ್ಡ್ ಒಳಗೊಂಡ ಕಿಟ್ ವಿತರಿಸಿದರು.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…