ಸೋತರೂ ಸುಳ್ಯದ ಅಭಿವೃದ್ಧಿಗೆ ದುಡಿಯುವೆ | ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ಹೇಳಿಕೆ |

May 17, 2023
8:09 PM

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್‌ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.

ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.

ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror