ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.
ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.
ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.