ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.
ತನ್ನ ವಯಸ್ಸಿನಿಂದಾಗಿ ನನ್ನ ಸ್ವರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದಾರೆ. ಈ ಕಾರಣದಿಂದ ಮುಂದೆ ನಾನು ಚುನಾವಣೆಯಲ್ಲಿ ಸ್ಫರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಂಟ್ವಾಳದಲ್ಲಿ ಕಳೆದ ಬಾರಿಗಿಂತ ಈ ಬಾರಿ ನನಗೆ ಹೆಚ್ಚು ಮತಗಳು ಬಿದ್ದಿದ್ದರೂ ಸೋಲಾಗಿದೆ. ಸೋಲಿನ ಅವಲೋಕನ ನಡೆಸುತ್ತೇವೆ. ನಾನೆಂದೂ ಪಕ್ಷದ ಮಾತನ್ನು ಮೀರಿಲ್ಲ, ಮುಂದೆಯು ಮೀರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಹಿನ್ನಲೆ ಕಾರ್ಯಕರ್ತರು ಎದೆಗುಂದದೆ ಕಾರ್ಯನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…