ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ :ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

May 23, 2023
3:23 PM

ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಅವರ ಕೊಠಡಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಬುಧವಾರ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅವಿರೋಧವಾಗಿ ಯು.ಟಿ‌ ಖಾದರ್ ಅವರನ್ನು ಆಯ್ಕೆ ಮಾಡಲಾಗುತ್ತದೆ. ನಾಳೆ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಯು.ಟಿ ಖಾದರ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆರೋಗ್ಯ ಸಚಿವರಾಗಿ, ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲಿ ಅವರು ಪ್ರತಿಪಕ್ಷದ ಉಪ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ
ಮುಂಗಾರಿನಲ್ಲಿ ಕೃಷಿ ಹಾನಿಗೊಳಗಾದ ರೈತರಿಗೆ ಪರಿಹಾರ | ರಾಜ್ಯಕ್ಕೆ, 384 ಕೋಟಿ ಕೇಂದ್ರ ಸರ್ಕಾರ NDRF ನಿಧಿ ಬಿಡುಗಡೆ
October 23, 2025
5:07 PM
by: The Rural Mirror ಸುದ್ದಿಜಾಲ
ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ
October 14, 2025
9:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror