ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಅವರ ಕೊಠಡಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಬುಧವಾರ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅವಿರೋಧವಾಗಿ ಯು.ಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗುತ್ತದೆ. ನಾಳೆ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಯು.ಟಿ ಖಾದರ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆರೋಗ್ಯ ಸಚಿವರಾಗಿ, ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲಿ ಅವರು ಪ್ರತಿಪಕ್ಷದ ಉಪ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…
ರೈತರಿಗೆ ‘ಎನ್‌ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…