ಗುಜರಾತ್ ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.ಹನುಮಂಜಿ ಚಾರ್ ಧಾಮ್’ ಯೋಜನೆಯ ಭಾಗವಾಗಿ ದೇಶಾದ್ಯಂತ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಪ್ರತಿಮೆಗಳಲ್ಲಿ ಈ ಪ್ರತಿಮೆ ಎರಡನೆಯದು ಎಂದು ಪ್ರಧಾನಿ ಕಾರ್ಯಾಲಯ ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸರಣಿಯ ಮೊದಲ ಪ್ರತಿಮೆಯನ್ನು ಉತ್ತರದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 2010 ರಲ್ಲಿ ಸ್ಥಾಪಿಸಲಾಯಿತು. ಆದರೆ, ಮೂರನೇ ಪ್ರತಿಮೆಯ ಕೆಲಸವನ್ನು ದಕ್ಷಿಣದಲ್ಲಿ ರಾಮೇಶ್ವರಂನಲ್ಲಿ ಪ್ರಾರಂಭಿಸಲಾಗಿದೆ ಎಂದು ಪಿಎಂಒ ಮಾಹಿತಿ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…