ದೀಪಾವಳಿಯು ಬೆಳಕಿನ ಹಬ್ಬವಾಗಿದ್ದು, ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿಯಾಗಿ, ಮಾಲಿನ್ಯರಹಿತವಾಗಿ ಆಚರಿಸಬೇಕು. ಹಸಿರು ಪಟಾಕಿಯನ್ನು ಹೊರತುಪಡಿಸಿ, ಇತರೆ ಪಟಾಕಿಯ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದೆ ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಯಾರಾದ ಹಸಿರು ಪಟಾಕಿಗಳನ್ನು ಬಯಲು ಪ್ರದೇಶದಲ್ಲಿ ಮಾರಾಟ ಮಾಡುವ ಬಗ್ಗೆ ಮತ್ತು ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೀಪಾವಳಿ ಹಬ್ಬ ಆಚರಿಸುವ ಸಂಬಂಧ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಪಟಾಕಿ ಬಳಕೆ ಕುರಿತಂತೆ ನೀಡಿರುವ ಆದೇಶ, ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತಿಗೆ ಒಳಪಟ್ಟು, ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆ ಆಗದಂತೆ ಪಟಾಕಿ ಮಾರಾಟ ಮಾಡಬೇಕು ಎಂದು ಹೇಳಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement