ಬೇಟೆಯಾಡೋದು ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರು ಕಾಡು ಪ್ರಾಣಿಗಳನ್ನು ಮನಸ್ಸೋ ಇಚ್ಚೆ ಬೇಟೆಯಾಡುವ ಮಂದಿ ಅನೇಕರಿದ್ದಾರೆ. ಹೀಗೆ ಚಿಕ್ಕಮಗಳೂರಿನಲ್ಲಿ ಬೇಟೆಗೆಂದು ತೆರಳಿ ಇಬ್ಬರು ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮುಳ್ಳು ಹಂದಿ ಬೇಟೆಗೆ ತೆರಳಿದ್ದ ಇಬ್ಬರು ಕೂಲಿಕಾರ್ಮಿಕರು ಸುರಂಗದೊಳಗೆ ನುಗ್ಗಿದ ಪರಿಣಾಮ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ್( 26 ವರ್ಷ) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಚಿಕ್ಕಮಗಳೂರಿಗೆ ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಕಾಳಿಕಟ್ಟೆ ಗುಡ್ಡದ ಗವಿಯಲ್ಲಿರುವ ಗುಡ್ಡಕ್ಕೆ ತೆರಳಿದ್ದರು. ಸುರಂಗದ ಪ್ರವೇಶ ದ್ವಾರಕ್ಕೆ ಹೊಗೆ ಹಾಕಿ ಇಬ್ಬರು ಒಳಗೆ ಹೋದಾಗ ಹೊಗೆಯಿಂದಾಗಿ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಸುದ್ದಿ ತಿಳಿದು ಬಾಳೂರು ಸಬ್ಇನ್ಸ್ ಪೆಕ್ಟರ್ ಪವನ್ ಕುಮಾರ್ ಅವರು ಸ್ಥಳೀಯರ ನೆರವಿನಿಂದ ಗುಹೆಯೊಳಗೆ ಹೋಗಿ ಶವಗಳನ್ನು ಹೊರತೆಗೆದಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…