ಮಂಗಳೂರು(Mangalore), ಉಡುಪಿ(Udupi), ಉತ್ತರಕನ್ನಡ (Uttar kannada) ಸುಂದರ ಕರಾವಳಿ ತೀರಗಳನ್ನು(Coastal Area) ಹೊಂದಿರುವ ಜಿಲ್ಲೆಗಳು. ಮನಸ್ಸು ಮಾಡಿದ್ರೆ ಪ್ರವಾಸೋದ್ಯಮ(Tourism), ಮತ್ಸೋದ್ಯಮ(Fishery) ಮೂಲಕ ಭಾರಿ ವಾಣಿಜ್ಯ ಚಟುವಟಿಕೆಗಳನ್ನೇ ನಡೆಸಬಹುದು. ಆದರೆ ನಮಮ್ಮ ಸರ್ಕಾರಗಗಳು ಅದ್ಯಾವುದನ್ನು ತುಂಬಾ ಸೀರಿಯಸ್ ಆಗಿ ತೆಗೆದುಕೊಂಡಿದ್ದೇ ಇಲ್ಲ. ಒಂದು ವೇಳೆ ಕರಾವಳಿಯನ್ನು ಸರಿಯಾದ ರೀತಿಯಲ್ಲಿ ಅಭಿವೃದ್ಧಿ ಮಾಡಿದ್ರೆ ಅದರಿಂದ ಸರ್ಕಾರದ ಬೊಕ್ಕಸಕ್ಕೆ ಅದೆಷ್ಟು ಹಣ ಹರಿದು ಬರಹುದೋ..? ಇದೀಗ ಮಂಗಳೂರು (Mangaluru) ಮತ್ತು ಕಾರವಾರದಲ್ಲಿ (Karawara) ಬಂದರು ನಿರ್ಮಾಣ ಮಾಡಲಾಗುತ್ತದೆ ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ್ ವೈದ್ಯ (Mankal Vaidya) ಭರವಸೆ ನೀಡಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆ ವಿಧಾನಸೌಧದಲ್ಲಿ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಮಂಕಾಳ್ ವೈದ್ಯ, ಕಾರವಾರ, ಮಂಗಳೂರಿನಲ್ಲಿ ಬಂದರು ಮಾಡಲು ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ. 1 ಕೋಟಿ ರೂ. ನಿಂದ 1 ಸಾವಿರ ಕೋಟಿ ರೂ.ನಲ್ಲಿ ಬಂದರು (Port) ಮಾಡಬಹುದು. ಯಾವ ಮಾದರಿಯಲ್ಲಿ ಬಂದರು ಮಾಡಬೇಕು ಎಂದು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ. ಮಾರುಕಟ್ಟೆ ಮತ್ತು ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಬಂದರು ಮಾಡಲು ಚರ್ಚೆಯಾಗಿದೆ. ಆದಷ್ಟು ಬೇಗ ಇದಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡುವುದಾಗಿ ತಿಳಿಸಿದರು.
ಮೀನುಗಾರರಿಗೆ 200 ಲೀಟರ್ ಡೀಸೆಲ್ ಕೊಡುವುದಾಗಿ ಹೇಳಿದ್ದೇವೆ ಅದನ್ನು ಕೊಡುತ್ತೇವೆ. ಮೀನುಗಾರರಿಗೆ ಸೀಮೆಎಣ್ಣೆ ಬಗ್ಗೆ ಸಮಸ್ಯೆ ಇತ್ತು. ಇದರಿಂದ ಮೀನುಗಾರಿಗೆ ಸಮಸ್ಯೆ ಆಗುತ್ತಿತ್ತು. ಹೀಗಾಗಿ 10 ತಿಂಗಳು ಬಿಳಿ ಸೀಮೆಎಣ್ಣೆಯನ್ನು ಸರ್ಕಾರವೇ ಖರೀದಿ ಮಾಡಿ 35 ರೂಪಾಯಿ ಸಬ್ಸಿಡಿ ದರದಲ್ಲಿ ಮೀನುಗಾರಿಕೆ (Fishing) ಮಾಡುವವರಿಗೆ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಸೀಮೆಎಣ್ಣೆ ಕೊಡುತ್ತಿಲ್ಲ. ಹೀಗಾಗಿ ದೇಶದಲ್ಲಿ ಮೊದಲ ಬಾರಿಗೆ ನಾವೇ ಸೀಮೆಎಣ್ಣೆ ಕೊಡುತ್ತಿದ್ದೇವೆ. ಸರ್ಕಾರ 300 ಲೀಟರ್ ನೀಡಲು ಸಿದ್ದ ಎಂದು ಹೇಳಿದರು.
ಬೆಂಗಳೂರಿನಲ್ಲಿ ನವೆಂಬರ್ 21 ರಂದು ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮ ಮಾಡುತ್ತಿದ್ದೇವೆ. ಅಂದು 8 ಲಕ್ಷ ಮೌಲ್ಯದ ಮೀನುಗಾರರಿಗೆ ಮೀನು ಮಾರಾಟ ಮಾಡುವ ಗಾಡಿ ಕೊಡುತ್ತಿದ್ದೇವೆ. 300 ಗಾಡಿ ಪೈಕಿ ಬೆಂಗಳೂರಿಗೆ 150 ಗಾಡಿ ಕೊಡುತ್ತಿದ್ದೇವೆ. ಸರ್ಕಾರ ಸೆಕ್ಯುರಿಟಿ ಫಂಡ್ ಹೆಸರಿನಲ್ಲಿ ಫಲಾನುಭವಿಗಳಿಂದ 2 ಲಕ್ಷ ರೂ. ಡೆಪಾಸಿಟ್ ಪಡೆದುಕೊಳ್ಳುತ್ತದೆ. ಎಸ್‌ಸಿ ಎಸ್‌ಟಿ ಫಲಾನುಭವಿಗಳಿಂದ 1.5 ಲಕ್ಷ ರೂ. ಡೆಪಾಸಿಟ್ ತೆಗೆದುಕೊಳ್ಳುತ್ತೇವೆ ಎಂದರು.
3 ಜಿಲ್ಲೆಗಳಲ್ಲಿ 13 ಐಲ್ಯಾಂಡ್ ಗುರುತಿಸಿದ್ದು, ಅಭಿವೃದ್ಧಿ ಮಾಡಲು ಪಿಪಿಪಿ ಮಾಡೆಲ್ ಮಾಡಬೇಕಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ. ಐಲ್ಯಾಂಡ್ ಅಭಿವೃದ್ಧಿ ಮಾಡಿದರೆ ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆ. ಈ ನಿಟ್ಟಿನಲ್ಲಿ ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ ಎಂದರು. ಅಂಕೋಲದಲ್ಲಿ (Ankola) ವಿಮಾನ ನಿಲ್ದಾಣಕ್ಕೆ (Air Port) ಬೇಕಾದ ಜಮೀನು ಖರೀದಿಯ ಪ್ರಕ್ರಿಯೆಗಳು ನಡೆಯುತ್ತಿವೆ. ಭೂಮಿ ಕೊಡುವವರಿಗೆ ಪರ್ಯಾಯ ಭೂಮಿ ನೀಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
Fisheries and Ports Minister Mankal Vaidya has assured that ports will be built in Mangaluru and Karawara. People’s representatives of Uttara Kannada, Dakshina Kannada, Udupi district and officials of various departments met at Vidhansauda. Speaking after the meeting, Minister Mankal Vaidya said that there was a discussion in today’s meeting to make a port at Karwar, Mangalore.
– ಅಂತರ್ಜಾಲ ಮಾಹಿತಿ
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…