Advertisement
ಸುದ್ದಿಗಳು

ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಉಪನ್ಯಾಸ | ಕಲಿಕೆಯ ಅವಧಿಯಲ್ಲಿಯೇ ಬ್ರಾಂಡ್ ಆಗಿ ರೂಪುಗೊಳ್ಳಬೇಕು : ಉಮೇಶ್ ಶಿಮ್ಲಡ್ಕ

Share

ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ ಮುಖಮೌಲ್ಯಗಳನ್ನು ಹೊಂದಿದ್ದಲ್ಲಿ ಉತ್ಕೃಷ್ಟ ಉದ್ಯೋಗಗಳ ಸಾಧ್ಯತೆ ನಮ್ಮದಾಗುತ್ತದೆ ಎಂದು ಹಿರಿಯ ಪತ್ರಕರ್ತ ಉಮೇಶ್ ಶಿಮ್ಲಡ್ಕ ಹೇಳಿದರು.

Advertisement
Advertisement

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Advertisement

ಆಧುನಿಕ ದಿನಮಾನಗಳಲ್ಲಿ ನಮ್ಮ ಲೇಖನ – ಬರಹಗಳ ಪ್ರಕಟಣೆಗೆ ಪತ್ರಿಕೆ, ನಿಯತಕಾಲಿಕಗಳನ್ನಷ್ಟೇ ಕಾಯುತ್ತಾ ಕೂರಬೇಕಾಗಿಲ್ಲ. ನಮ್ಮದೇ ಆದ ಸ್ವಂತ ಬ್ಲಾಗ್, ಫೇಸ್ ಬುಕ್ ಪುಟಗಳನ್ನು ಆರಂಭಿಸಬಹುದು. ವೈವಿಧ್ಯಮಯ ವೀಡಿಯೋಗಳನ್ನೂ ರೂಪಿಸಬಹುದು. ಈ ರೀತಿಯಾಗಿ ನಮ್ಮನ್ನು ನಾವು ಪ್ರಸ್ತುತಗೊಳಿಸುತ್ತಾ ಸಾಗುವುದು ಇಂದಿನ ಅನಿವಾರ್ಯತೆಯೂ ಹೌದು. ಮೊದಲೆಲ್ಲಾ ಮಾಧ್ಯಮಗಳಲ್ಲಿ ಒಂದೊಂದು ಕೆಲಸಕ್ಕೆ ಒಬ್ಬೊಬ್ಬರಿರುತ್ತಿದ್ದರು. ಆದರೆ ಈಗ ಯಾವುದೇ ಕೆಲಸವನ್ನು ಮಾಡುವುದಕ್ಕೂ ಪ್ರತಿಯೊಬ್ಬರೂ ತಯಾರಿರಬೇಕು ಎಂದು ನುಡಿದರು.

ತಾವು ಪಡೆಯುವ ವೇತನದಲ್ಲಿ ಶೇಕಡಾ ಇಪ್ಪತ್ತೈದರಷ್ಟು ಮಾತ್ರ ನಮ್ಮ ಕೆಲಸಕ್ಕೆ. ಉಳಿದ ಎಪ್ಪತ್ತೈದು ಭಾಗ ನಮ್ಮ ಆಲೋಚನಾ ವಿಧಾನಕ್ಕೆ ಎಂಬ ಕಲ್ಪನೆ ಪ್ರತಿಯೊಬ್ಬ ಪತ್ರಕರ್ತನಲ್ಲೂ ಇರಬೇಕು. ಆದ್ದರಿಂದ ನಮ್ಮ ಯೋಚನೆ, ಸೃಜನಶೀಲತೆ ಮಾಧ್ಯಮ ಕ್ಷೇತ್ರದಲ್ಲಿ ನಾವು ಬೆಳಗುವಂತೆ ಮಾಡುತ್ತದೆ ಎಂದರಲ್ಲದೆ ಡಿಜಿಟಲ್ ಪತ್ರಿಕೋದ್ಯಮ ಸಾಕಷ್ಟು ಬೆಳೆಯುತ್ತಿದೆ. ಈ ಕ್ಷೇತ್ರ ನೂತನ ಪತ್ರಕರ್ತರಾಗುವವರಿಗೆ ಹೊಸಸಾಧ್ಯತೆಯಾಗಿ ಗೋಚರಿಸಲಾರಂಭಿಸಿದೆ ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸ್ಥಾಪಕ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ ಪ್ರತಿಯೊಬ್ಬ ಪತ್ರಕರ್ತರಿಂದಲೂ ಕಲಿಯುವ ವಿಷಯಗಳು ಸಾಕಷ್ಟಿವೆ. ನಮಗೆ ದೊರಕುವ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪತ್ರಿಕೋದ್ಯಮದಲ್ಲಿ ಮುಂದುವರಿಯಬೇಕು. ನಾನಾ ಪತ್ರಕರ್ತರ ಅನುಭವಗಳನ್ನು ನಮ್ಮ ಬದುಕಿಗೆ ಪೂರಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಕರೆನೀಡಿದರು.

ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ಪ್ರಾರ್ಥಿಸಿದರು. ವಿದ್ಯಾರ್ಥಿ ಗುರುಪ್ರಸಾದ್ ಸ್ವಾಗತಿಸಿದರು. ವಿದ್ಯಾರ್ಥಿ ಅಕ್ಷಿತ್ ರೈ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

10 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

10 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

10 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

10 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

11 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

11 hours ago