ದಕ್ಷಿಣ ಕನ್ನಡ ಜಿಲ್ಲೆಯ ಎಂಡೋಸಂತ್ರಸ್ತರಿಗೆ ಸೂಕ್ತವಾದ ನ್ಯಾಯ, ಪರಿಹಾರ ಇನ್ನೂ ಮರೀಚಿಕೆಯಾಗಿದೆ. ಇದೀಗ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ್ಪಿನಂಗಡಿಯಲ್ಲಿ ಭಾನುವಾರ ಸಭೆ ನಡೆಯಿತು.
ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಂಗಮ ಕೃಪಾ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾಸಿಕ ಮಾಸಿಕ ವೇತನವನ್ನು 4 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸುವಂತೆ ಆಗ್ರಹಿಸಲಾಯಿತು. ಇದಕ್ಕಾಗಿ ಎಂಡೋಸಲ್ಫಾನ್ ಸಂತ್ರಸ್ತರು ಹಾಗೂ ಪಾಲಕರು ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲು ನಿರ್ಧರಿಸಿದರು.
ಪ್ರತಿಯೊಬ್ಬ ಸಂತ್ರಸ್ತರು ಹಾಗೂ ಅವರ ಮನೆಯವರು ( Endosulfan victims and their families) ಸೆ.20 ರಿಂದ 30 ರವರೆಗೆ ಅಂಚೆ ಕಾರ್ಡ್‌ಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಬೇಕು ಎಂದು ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಮನವಿ ಮಾಡಿದರು. ಪೌಷ್ಟಿಕ ಆಹಾರ, ಆಧಾರ್ ಕಾರ್ಡ್‌ಗಳಂತಹ ಇತರ ಬೇಡಿಕೆಗಳನ್ನು ಸಹ ಈಡೇರಿಸಲು ಇದೇ ವೇಳೆ ಒತ್ತಾಯಿಸಲಾಯಿತು. ಈ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಯಾವುದೇ ಪ್ರತಿಕ್ರಿಯೆ ಬಾರದಿದ್ದಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಕೂಡಾ ಹಿಂಜರಿಯುವುದಿಲ್ಲ ಎಂದು ಶ್ರೀಧರ ಗೌಡ ಘೋಷಿಸಿದರು.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಸಂಜೀವ ಕಬಕ, ಶಿವು ರಾಠೋಡ್ ಮತ್ತು ತುಕಾರಾಂ ಶೆಟ್ಟಿ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?