ಬೆಂಗಳೂರು | ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

January 20, 2023
9:52 PM

ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉದ್ಯೋಗಕ್ಕೆ ತೆರಳುವವರಿಗೆ ಸಂಜೆ ಅಂಚೆ ಕಚೇರಿಯಿಂದ ಅನುಕೂಲವಾಗುತ್ತದೆ.

ಕಳೆದ ನವೆಂಬರ್ ನಲ್ಲಿ ಪ್ರಾಯೋಗಿಕವಾಗಿ ಧಾರವಾಡದಲ್ಲಿ ರಾಜ್ಯದ ಮೊದಲ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ ಆರಂಭಿಸಲಾಗಿದೆ. ಅಂಚೆ ಕಚೇರಿಗಳು ಸಾಮಾನ್ಯವಾಗಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3:30ರ ವರೆಗೆ ಮಾತ್ರ ಸೇವೆ ನೀಡಲಿದ್ದು, ಸಂಜೆ ಅಂಚೆ ಕಚೇರಿ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನ 3:30ಕ್ಕೆ ಅಂಚೆ ಸೇವೆ ಸ್ಥಗಿತಗೊಂಡ ನಂತರ ಸ್ಪೀಡ್ ಪೋಸ್ಟ್ ಗೆ ರಾಜಭವನ ರಸ್ತೆಯ ಜಿಪಿಓ ಗೆ ತೆರಳಬೇಕಿತ್ತು. ರಿಜಿಸ್ಟ್ರಾರ್ ಪೋಸ್ಟ್ ಮಾಡಲು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ಗೆ ಹೋಗಬೇಕಾಗಿತ್ತು. ಸಂಜೆ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆ ಫಿಲಾಟಲಿ ಸೇಲ್ಸ್, ಆಧಾರ್ ತಿದ್ದುಪಡಿ ಸೇವೆ ನೀಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror