ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉದ್ಯೋಗಕ್ಕೆ ತೆರಳುವವರಿಗೆ ಸಂಜೆ ಅಂಚೆ ಕಚೇರಿಯಿಂದ ಅನುಕೂಲವಾಗುತ್ತದೆ.
ಕಳೆದ ನವೆಂಬರ್ ನಲ್ಲಿ ಪ್ರಾಯೋಗಿಕವಾಗಿ ಧಾರವಾಡದಲ್ಲಿ ರಾಜ್ಯದ ಮೊದಲ ಸಂಜೆ ಅಂಚೆ ಕಚೇರಿ ಆರಂಭಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ ಆರಂಭಿಸಲಾಗಿದೆ. ಅಂಚೆ ಕಚೇರಿಗಳು ಸಾಮಾನ್ಯವಾಗಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3:30ರ ವರೆಗೆ ಮಾತ್ರ ಸೇವೆ ನೀಡಲಿದ್ದು, ಸಂಜೆ ಅಂಚೆ ಕಚೇರಿ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನ 3:30ಕ್ಕೆ ಅಂಚೆ ಸೇವೆ ಸ್ಥಗಿತಗೊಂಡ ನಂತರ ಸ್ಪೀಡ್ ಪೋಸ್ಟ್ ಗೆ ರಾಜಭವನ ರಸ್ತೆಯ ಜಿಪಿಓ ಗೆ ತೆರಳಬೇಕಿತ್ತು. ರಿಜಿಸ್ಟ್ರಾರ್ ಪೋಸ್ಟ್ ಮಾಡಲು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ಗೆ ಹೋಗಬೇಕಾಗಿತ್ತು. ಸಂಜೆ ಅಂಚೆ ಕಚೇರಿಯಲ್ಲಿ ಸ್ಪೀಡ್ ಪೋಸ್ಟ್, ರಿಜಿಸ್ಟ್ರಾರ್ ಪೋಸ್ಟ್, ಪಾರ್ಸೆಲ್ ಸೇವೆ ಫಿಲಾಟಲಿ ಸೇಲ್ಸ್, ಆಧಾರ್ ತಿದ್ದುಪಡಿ ಸೇವೆ ನೀಡಲಾಗುತ್ತದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…