Advertisement
ಸುದ್ದಿಗಳು

ಆ.25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆ  ಸ್ಥಗಿತ

Share

ಭಾರತೀಯ ಅಂಚೆ ಇಲಾಖೆ ಆ. 25 ರಿಂದ ಅಮೆರಿಕಾಕ್ಕೆ ಅಂಚೆ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.  ಅಂತಾರಾಷ್ಟ್ರೀಯ ಸಾಗಣೆ ಮೇಲೆ ಅಮೇರಿಕಾ ಹೊಸ ಸೀಮಾಸುಂಕಗಳನ್ನು ಪರಿಚಯಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಅಮೇರಿಕಾದ ಆಡಳಿತವು  800 ಯುಎಸ್‌ ಡಾಲರ್‌ವರೆಗಿನ ಸರಕುಗಳಿಗೆ ಸುಂಕ-ಮುಕ್ತ ಡಿ ಮಿನಿಮಿಸ್ ವಿನಾಯಿತಿಯನ್ನು ತೆಗೆದುಹಾಕುವುದಾಗಿ ಜುಲೈ 30 ರಂದು ಆದೇಶ ಹೊರಡಿಸಿತ್ತು. 100 ಯುಎಸ್ ಡಾಲರ್‌ವರೆಗಿನ ಉಡುಗೊರೆ ವಸ್ತುಗಳನ್ನು ಹೊರತುಪಡಿಸಿ ಎಲ್ಲಾ ಅಂಚೆ ವಸ್ತುಗಳೂ ಈ ಹೊಸ ಸೀಮಾಸುಂಕಗಳಿಗೆ ಒಳಪಡಲಿವೆ. ಈ ಆದೇಶ ಆಗಸ್ಟ್ 29 ರಿಂದ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಅಮೇರಿಕಾಕ್ಕೆ ತಾತ್ಕಾಲಿಕವಾಗಿ ಅಂಚೆ ಸೇವೆ ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಪರಿಸ್ಥಿತಿಯನ್ನು ಅಂಚೆ ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಆದಷ್ಟು ಬೇಗ ಈ ಸೇವೆಗಳನ್ನು ಸರಾಗಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಅಮೇರಿಕಾಕ್ಕೆ ಅಂಚೆಯನ್ನು ಕಳುಹಿಸಲು ಪಾವತಿ ಮಾಡಿರುವ ಗ್ರಾಹಕರು ಮರುಪಾವತಿಯನ್ನು ಪಡೆಯಬಹುದು, ಉಂಟಾದ ಈ ಅನಾನುಕೂಲತೆಯ ಬಗ್ಗೆ ಅಂಚೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

21 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

21 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago