ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ, ನಿಮ್ಮ ಮನೆಗಳಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು. ಮಹಿಳೆಯರು, ಯುವಕರು, ರೈತರು 200 ಯೂನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel