ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂಪಾಯಿ ವಿನಿಯೋಗ ಮಾಡಲಾಗುವುದು ಎಂದು ಹೇಳಿದ್ದಾರೆ. ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು, ರಾಜ್ಯದಲ್ಲಿ ಅಗತ್ಯವಿರುವ ಕಡೆ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದರು. ಕೊಡಗು ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸೆಸ್ಕಾಂ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel