Advertisement
MIRROR FOCUS

ರಾಜ್ಯದ ವಿವಿಧೆಡೆ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ

Share

ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ  ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂಪಾಯಿ ವಿನಿಯೋಗ ಮಾಡಲಾಗುವುದು ಎಂದು ಹೇಳಿದ್ದಾರೆ.  ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು, ರಾಜ್ಯದಲ್ಲಿ ಅಗತ್ಯವಿರುವ ಕಡೆ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದರು. ಕೊಡಗು ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸೆಸ್ಕಾಂ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 hour ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago