ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು ಬದಲಾವಣೆಯ ಸಂಕೇತವಾಗಿದ್ದು ಪ್ರತೀ ವ್ಯಕ್ತಿಯ ಆರೋಗ್ಯ ಸುಧಾರಣೆಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಪೈವಳಿಕೆ ಪಂಚಾಯತ್ ನ ಬಾಯಾರಿನ ಬಾಯಾರುಪದವಿನಲ್ಲಿ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತೀ ವ್ಯಕ್ತಿಯು ಆರ್ಥಿಕ ಮಟ್ಟ ಎತ್ತರಿಸುತ್ತಾ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.
ಅತಿಥಿಗಳಾಗಿದ್ದ ಡಾ| ಮುರಳೀಧರ್ ಶೆಟ್ಟಿ ಮಾತನಾಡಿ “ಈಗಿನ ಕಾಲದಲ್ಲಿ ಬದಲಾಗುತ್ತಿರುವ ಜನರ ಜೀವನ ಶೈಲಿಯಲ್ಲಿ ಔಷಧಗಳ ಅವಶ್ಯಕತೆ ಹೆಚ್ಚಾಗಿದ್ದು , ಜನೌಷಧಿಯು ಜನಸಾಮಾನ್ಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು. ಜನೌಷಧಿಯಲ್ಲಿ ಬ್ರಾಂಡ್ ಬೇರೆಯಾಗಿದ್ದರೂ ಬೇರೆ ಕಂಪನಿಯಲ್ಲಿರುವ ಅದೇ ಅಂಶಗಳನ್ನು ಒಳಗೊಂಡಿರುತ್ತದೆ – ಪರಿಣಾಮಕಾರಿಯಾಗಿದೆ” ಎಂದು ಹೇಳಿದರು. ವಿಡಿಯೋ ವರದಿ ಇಲ್ಲಿದೆ.….
ಕಲ್ಲಡ್ಕ ಶೀರಾಮ ವಿದ್ಯಾಕೇಂದ್ರದ ಪ್ರಾಂಶುಪಾಲರಾದ ಕ್ರಷ್ಣಪ್ರಸಾದ ಕೆ ಎನ್ ಮತ್ತು ಪೈವಳಿಕೆ ಪಂಚಾಯತ್ ಹೆಲ್ತ್ ಮತ್ತು ಎಡ್ಯುಕೇಶನ್ ಸ್ಟ್ಯಾಂಡಿಂಗ್ ಕಮಿಟಿ ಚೇರ್ಮೇನ್ ಜೆಡ್ ಎ ಕಯ್ಯಾರ್ ಶುಭ ಹಾರೈಸಿದರು.
ಜನೌಷಧಿ ಕೇಂದ್ರದ ಮುಖ್ಯಸ್ಥ ವೆಂಕಟರವಿ ಕಳಂದೂರು ಸ್ವಾಗತಿಸಿ ರೂಪಲಕ್ಷ್ಮೀ ಕಳಂದೂರು ವಂದಿಸಿದರು. ಶಂಕರ ಭಟ್ ಉಳುವಾನ ಕಾರ್ಯಕ್ರಮ ನಿರ್ವಹಿಸಿದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…