ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ | 17ನೇ ಕಂತಿನ ಹಣ ರೈತರ ಖಾತೆಗೆ ಯಾವಾಗ ಬರುತ್ತೆ..?

April 29, 2024
2:40 PM

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಾಗಿಂದಲೂ ರೈತರ(Farmer) ಖಾತೆಗೆ ನೇರವಾಗಿ ಹಣ ತಲುಪುತ್ತಿದೆ. ಅನೇಕ ರೈತರಿಗೆ ತಕ್ಕಮಟ್ಟಿನ ಪ್ರಯೋಜನವಾಗಿದೆ. ಸಾಮಾನ್ಯವಾಗಿ ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಮುಂದಿನ ಪಿಎಂ ಕಿಸಾನ್‌ ಕಂತು ಯಾವಾಗ ಬರಲಿದೆ….

Advertisement

ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರದ(Central govt) ಈ ಜನಪ್ರಿಯ ಯೋಜನೆಯಲ್ಲಿ(Scheam) ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ 2000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಸದ್ಯ 17ನೇ ಕಂತಿನ ಯೋಜನೆಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ರೈತರು ಮೇ 2024 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಪಡೆಯಬಹುದು. ಆದರೆ, ಈ ಬಗ್ಗೆ ಸರಕಾರದಿಂದ ಯಾವುದೇ ಘೋಷಣೆಯಾಗಿಲ್ಲ ಮೊದಲು 16 ನೇ ಕಂತನ್ನು 28 ಫೆಬ್ರವರಿ 2024 ರಂದು ವರ್ಗಾಯಿಸಲಾಯಿತು.

ಸಾಮಾನ್ಯವಾಗಿ, ಯೋಜನೆಯ ಕಂತುಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಾವತಿಸಲಾಗುತ್ತದೆ. ಒಂದು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್‌ನಲ್ಲಿ. ಫೆಬ್ರವರಿಯಲ್ಲಿ 16ನೇ ಕಂತು ಪಾವತಿಯಾಗಿರುವುದರಿಂದ ಮೇ ತಿಂಗಳಿನಲ್ಲಿ ಯಾವುದೇ ದಿನ 17ನೇ ಕಂತು ಬರಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ. ಆದರೆ, ಇನ್ನೂ ನಿರ್ದಿಷ್ಟ ದಿನಾಂಕವನ್ನು ಪ್ರಕಟಿಸಿಲ್ಲ.

– ಅಂತರ್ಜಾಲ ಮಾಹಿತಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ
ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್
July 15, 2025
9:31 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು
July 15, 2025
9:29 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group