ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

June 6, 2026
9:23 AM
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು ಪ್ರಜ್ಞಾನಂದ ನಿರ್ಮಿಸಿದ್ದಾರೆ. ಅಂತಿಮ ಸುತ್ತಿನಲ್ಲಿ ವಿನ್ಸೆಂಟ್ ಕೈಮರ್ ವಿರುದ್ಧ ಗೆದ್ದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಭಾರತದ ಯುವ ಚೆಸ್ ತಾರೆ, ಯುವ ಗ್ರ್ಯಾಂಡ್‌ಮಾಸ್ಟರ್  ಆರ್.‌ ಪ್ರಜ್ಞಾನಂದ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ನಾರ್ವೆಯ ಓಸ್ಲೋದಲ್ಲಿ ನಡೆದ ಪ್ರತಿಷ್ಠಿತ ನಾರ್ವೆ ಚೆಸ್‌ 2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

20 ವರ್ಷದ ಪ್ರಜ್ಞಾನಂದ ಅವರು ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಮಹತ್ವದ ಗೆಲುವು ಸಾಧಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಟೂರ್ನಿಯ ಆರಂಭದಲ್ಲಿ ಹಿನ್ನಡೆಯನ್ನು ಅನುಭವಿಸಿದ್ದರೂ ಕೊನೆಯ ಹಂತದಲ್ಲಿಗೆಲುವು ಕಂಡು ಚಾಂಪಿಯನ್ ಪಟ್ಟ ಅಲಂಕರಿಸಿದರು.

ಈ ಟೂರ್ನಿಯಲ್ಲಿ ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರ ತವರಿನಲ್ಲೇ ಪ್ರಶಸ್ತಿ ಗೆಲ್ಲುವ ಮೂಲಕ ಪ್ರಜ್ಞಾನಂದ ಜಾಗತಿಕ ಚೆಸ್ ವಲಯದ ಗಮನ ಸೆಳೆದಿದ್ದಾರೆ. ಟೂರ್ನಿಯ ವೇಳೆ ಕಾರ್ಲ್ಸನ್ ವಿರುದ್ಧವೂ ಗಮನಾರ್ಹ ಪ್ರದರ್ಶನ ನೀಡಿದ್ದ ಅವರು ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ ತಂದಿದ್ದಾರೆ. ಭಾರತೀಯ ಚೆಸ್‌ಗೆ ವಿಶ್ವ ವೇದಿಕೆಯಲ್ಲಿ ಹೊಸ ಎತ್ತರ ತಂದುಕೊಟ್ಟಿರುವ ಪ್ರಜ್ಞಾನಂದ ಅವರ ಸಾಧನೆ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Indian Grandmaster R Praggnanandhaa created history by becoming the first Indian to win the prestigious Norway Chess title. The 20-year-old secured the championship with a crucial final-round victory over Vincent Keymer, marking a major milestone for Indian chess.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror