ಕರ್ನಾಟಕದಲ್ಲಿ ನಾಗರಿಕ ಸೇವಾ ಕೇಂದ್ರಗಳಿಗೆ ಹೊಸ ಹೆಸರು – ಇನ್ನು ಮುಂದೆ ‘ಪ್ರಜಾ ಸೇವಾ ಕೇಂದ್ರ’

November 20, 2026
10:27 AM
ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ ಇನ್ನು ಮುಂದೆ 'ಪ್ರಜಾ ಸೇವಾ ಕೇಂದ್ರ' ಎಂಬ ಏಕರೂಪದ ಹೆಸರು ಅನ್ವಯವಾಗಲಿದೆ. ನವೆಂಬರ್ 18ರಿಂದಲೇ ಹೊಸ ಹೆಸರು ಜಾರಿಗೆ ಬಂದಿದ್ದು, ಏಕರೂಪದ ಲಾಂಛನ, ನಾಮಫಲಕ ಮತ್ತು ಬಣ್ಣದ ವಿನ್ಯಾಸ ರೂಪಿಸಲು ಸರ್ಕಾರ ಸೂಚಿಸಿದೆ.

ಕರ್ನಾಟಕ ರಾಜ್ಯದಾದ್ಯಂತ ವಿವಿಧ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗರಿಕ ಸೇವಾ ಕೇಂದ್ರಗಳಿಗೆ ರಾಜ್ಯ ಸರ್ಕಾರ ಹೊಸ ಹೆಸರನ್ನು ನಿಗದಿಪಡಿಸಿದೆ. ಇನ್ನು ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳನ್ನು ಒಟ್ಟಾಗಿ ‘ಪ್ರಜಾ ಸೇವಾ ಕೇಂದ್ರ’ ಎಂದು ಕರೆಯಲಾಗುತ್ತದೆ.

ರಾಜ್ಯದ ಎಲ್ಲಾ ನಾಗರಿಕ ಸೇವಾ ಕೇಂದ್ರಗಳಿಗೆ ಏಕರೂಪತೆ ತರುವ ಉದ್ದೇಶದಿಂದ ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಪ್ರಜಾಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಆದೇಶ ಹೊರಡಿಸಿದ್ದಾರೆ.

ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಬೆಂಗಳೂರು ಒನ್, ಇತರೆ ನಗರ ಮತ್ತು ಪಟ್ಟಣಗಳಲ್ಲಿ ಕರ್ನಾಟಕ ಒನ್ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದವು. ಒಂದೇ ರೀತಿಯ ಸರ್ಕಾರಿ ಸೇವೆಗಳನ್ನು ಒದಗಿಸುತ್ತಿದ್ದರೂ ಕೇಂದ್ರಗಳು ಬೇರೆ ಬೇರೆ ಹೆಸರುಗಳಿಂದ ಗುರುತಿಸಲ್ಪಡುತ್ತಿದ್ದವು.

ಈ ಹಿನ್ನೆಲೆಯಲ್ಲಿ ನವೆಂಬರ್ 18ರಿಂದಲೇ ರಾಜ್ಯದ ಎಲ್ಲಾ ಕೇಂದ್ರಗಳಿಗೆ ‘ಪ್ರಜಾ ಸೇವಾ ಕೇಂದ್ರ’ ಎಂಬ ಹೊಸ ಹೆಸರು ಅನ್ವಯವಾಗಲಿದೆ. ಅಧಿಕೃತ ಪತ್ರ ವ್ಯವಹಾರ, ನಾಮಫಲಕ, ವೆಬ್‌ ಪೋರ್ಟಲ್, ಸಾಫ್ಟ್‌ವೇರ್, ರಸೀದಿ ಹಾಗೂ ಪ್ರಚಾರ ಸಾಮಗ್ರಿಗಳಲ್ಲಿ ಹೊಸ ಹೆಸರನ್ನೇ ಬಳಸುವಂತೆ ಸರ್ಕಾರ ಸೂಚಿಸಿದೆ.

ಏಕರೂಪದ ಬ್ರಾಂಡಿಂಗ್ ವ್ಯವಸ್ಥೆ :  ರಾಜ್ಯದ ಎಲ್ಲಾ ಪ್ರಜಾ ಸೇವಾ ಕೇಂದ್ರಗಳಿಗೆ ಏಕರೂಪದ ಬ್ರಾಂಡಿಂಗ್ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಒಂದೇ ರೀತಿಯ ನಾಮಫಲಕ ವಿನ್ಯಾಸ, ಲಾಂಛನ ಹಾಗೂ ಬಣ್ಣದ ವಿನ್ಯಾಸ ರೂಪಿಸಿ ಸರ್ಕಾರದ ಅನುಮೋದನೆ ಪಡೆಯುವಂತೆ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರಿಗೆ ಸೂಚಿಸಲಾಗಿದೆ.

ಕೇಂದ್ರಗಳ ನಿರ್ವಾಹಕರು ಮತ್ತು ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲಿಯೂ ಹೊಸ ಹೆಸರನ್ನು ಅಳವಡಿಸಬೇಕು. ಆದೇಶವನ್ನು ರಾಜ್ಯಾದ್ಯಂತ ಅತ್ಯಂತ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ.

The Karnataka government has renamed all Bengaluru One, Karnataka One and Grama One citizen service centres as ‘Praja Seva Kendras’ with effect from November 18, 2026. The move aims to establish uniform naming, branding, signage, logos and colour schemes across the state. All official correspondence, portals, software, receipts and promotional materials must adopt the new name.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-11-2026 | ಅಕ್ವಾನ್ ಚಂಡಮಾರುತ ಶಿಥಿಲ | ನ.24ರಿಂದ ಕರ್ನಾಟಕದ ಕೆಲವೆಡೆ ಮಳೆಯ ಸಾಧ್ಯತೆ
November 19, 2026
12:54 PM
by: ಸಾಯಿಶೇಖರ್ ಕರಿಕಳ
ದೆಹಲಿಯ ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮತ್ತು ರಾಸಾಯನಿಕ ಮಾಲಿನ್ಯದ ಅಧ್ಯಯನ.
ಯಮುನಾ ನದಿಯಲ್ಲಿ ಮೈಕ್ರೋಪ್ಲಾಸ್ಟಿಕ್‌ಗಳ ಜೊತೆಗೆ ವಿಷಕಾರಿ ರಾಸಾಯನಿಕಗಳ ಮಿಶ್ರಣ ಪತ್ತೆ!
November 19, 2026
10:41 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ಭಾರತಕ್ಕೆ ನಡೆಯುತ್ತಿದ್ದ ಅಡಿಕೆ ಕಳ್ಳಸಾಗಣೆ ಪ್ರಕರಣದ ತನಿಖೆ.
ಅಡಿಕೆ ಸಾಗಣೆಗೆ ತಿಂಗಳಿಗೆ 120 ವಾಹನಗಳು – ನಕಲಿ ಬಿಲ್, ಹವಾಲಾ ಜಾಲ ಬಯಲು
November 19, 2026
9:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-11-2026 | ಅಕ್ವಾನ್ ಚಂಡಮಾರುತ ದುರ್ಬಲ; ನ.23ರಿಂದ ಕರ್ನಾಟಕದಲ್ಲಿ ಗುಡುಗು ಮಳೆಯ ಸಾಧ್ಯತೆ
November 18, 2026
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror