2024 ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಹೆಚ್ಚಿನ ಬಹುಮತ ಲಭ್ಯವಾಗಲಿದೆ ಎಂದು ರಾಜಕೀಯ ವಿಶ್ಲೇಷಕ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಈ ಬಾರಿ ಬಿಹಾರದಲ್ಲಿ ಎನ್‌ಡಿಎಗೆ ಭಾರಿ ಮುನ್ನಡೆ ಸಾಧಿಸುವ ಮುನ್ಸೂಚನೆ ನೀಡಿದ್ದಾರೆ. ಬಿಹಾರದ ಬಹುಪಾಲು ಜನರು ಲಾಲು ಯಾದವ್ ಅವರ ಆರ್‌ಜೆಡಿಗೆ ಮತ ಹಾಕಲು ಬಯಸುವುದಿಲ್ಲ, ರಾಜ್ಯದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಲಿದೆ ಎಂದಿದ್ದಾರೆ.
ಆಜ್ ತಕ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ “ಕ್ಲೀನ್ ಸ್ವೀಪ್” ಮಾಡಲಿದೆ ಎಂದು ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎಗೆ ಮರಳಿದ ನಂತರ ಅವರು ಹೇಳಿಕೆ ನೀಡಿರುವುದು ಈಗ ಬಹಳ ಕುತೂಹಲದ ವಿಷಯವಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ.
Prashant Kishor predicts majority for NDA in 2024 loksabha Elections.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel