ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

October 13, 2026
10:36 AM
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್ ಕ್ಲಿನಿಕ್ ಅಕ್ಟೋಬರ್ 19ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನೆಗೊಳ್ಳಲಿದೆ. ಡಾ. ಕೆ.ವಿ. ಚಿದಾನಂದ ಉದ್ಘಾಟಿಸಲಿದ್ದು, ಡಾ. ಶ್ರೀಪ್ರಕಾಶ್ ಬಿ. ಹಾಗೂ ಡಾ. ವಿದ್ಯಾ ಶಾರದಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುಳ್ಯದ ಎಪಿಎಂಸಿ ರಸ್ತೆಯಲ್ಲಿರುವ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ನೂತನವಾಗಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್ ಕ್ಲಿನಿಕ್ ಅ.19ರಂದು ಉದ್ಘಾಟನೆಗೊಳ್ಳಲಿದೆ.

Advertisement

 ಸುಳ್ಯ ತಾಲೂಕಿನ ಕರಿಕಳದ ಡಾ. ಬಿ.ಎಸ್. ಪ್ರಶಾಂತ್ ಅವರ ನೇತೃತ್ವದಲ್ಲಿ ಆರಂಭವಾಗುತ್ತಿರುವ ಈ ದಂತ ಚಿಕಿತ್ಸಾಲಯದ ಉದ್ಘಾಟನಾ ಸಮಾರಂಭವು ಅ.19 ರಂದು ಸೋಮವಾರ  ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯದ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಕ್ಲಿನಿಕ್ ಉದ್ಘಾಟಿಸಲಿದ್ದಾರೆ. ಪುತ್ತೂರಿನ ದರ್ಬೆಯ ಪ್ರಕಾಶ್ ಡೆಂಟಲ್ ಕ್ಲಿನಿಕ್‌ನ ಡಾ. ಶ್ರೀಪ್ರಕಾಶ್ ಬಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ನ ಸುಳ್ಯ ಶಾಖೆಯ ಅಧ್ಯಕ್ಷೆ ಡಾ. ವಿದ್ಯಾ ಶಾರದಾ ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಆಶೀರ್ವಾದ್ ಕಟ್ಟಡದ ಮಾಲಕಿ ನಮಿತಾ ಜೆ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಡಾ. ಬಿ.ಎಸ್. ಪ್ರಶಾಂತ್
ಡಾ. ಬಿ.ಎಸ್. ಪ್ರಶಾಂತ್

“ಆರೋಗ್ಯಕರ ನಗು, ಉಜ್ವಲ ಭವಿಷ್ಯ” ಎಂಬ ಧ್ಯೇಯವಾಕ್ಯದೊಂದಿಗೆ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್ ಕ್ಲಿನಿಕ್ ಮೂಲಕ ಹಲ್ಲು ಹಾಗೂ ವಸಡಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಬಿ ಎಸ್ ಪ್ರಶಾಂತ್‌‌ ತಿಳಿಸಿದ್ದಾರೆ.

Prashanthi Dental Clinic, led by Dr. B. S. Prashanth, will be inaugurated on October 19, 2026, at 9:30 AM in Ashirwad Building on APMC Road, near Sri Chennakeshava Temple in Sullia. Dr. K. V. Chidananda, President of the Academy of Liberal Education (R), Sullia, will inaugurate the clinic. Dr. Shriprakash B. of Prakash Dental Clinic, Darbe, Puttur, will attend as chief guest, while Dr. Vidya Sharada, President of the Indian Dental Association, Sullia Branch, will be the guest of honour.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?
October 13, 2026
9:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror