ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವರು ಭಾಗವಹಿಸಿದ್ದರು.
ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಹೊಸ ಮನೆಯನ್ನು ಕಟ್ಟಿಸಿಕೊಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲು ಭರವಸೆ ನೀಡಿದ್ದರು. ಹೀಗಾಗಿ ಪ್ರವೀಣ್ ಅವರ ನೆಟ್ಟಾರುವಿನಲ್ಲಿ ಈಗಿರುವ ಮನೆಯ ಸಮೀಪದಲ್ಲೇ ಹೊಸ ಮನೆಯನ್ನು ನಿರ್ಮಿಸುವುದು ಪ್ರವೀಣ್ ಅವರ ಕನಸಾಗಿತ್ತು. ಅದೇ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಭೂಮಿಪೂಜೆ ನಡೆಸಲಾಯಿತು.
ಭೂಮಿ ಪೂಜೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ , 60 ಲಕ್ಷ ರೂಪಾಯಿ ವೆಚ್ಚದಲ್ಲಿ 2,700 ಚದರ್ ಅಡಿ ಮನೆಯು ಮೇ ತಿಂಗಳ ಅಂತ್ಯದೊಳಗೆ ನಿರ್ಮಾಣವಾಗಲಿದೆ ಎಂದರು.
ಈ ಸಂದರ್ಭ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಮುರಳಿಕೃಷ್ಣ ಹಸಂತಡ್ಕ ಸೇರಿದಂತೆ ಹಲವು ಮಂದಿ ಭಾಗಿಯಾದರು.