ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ ಜಿಲ್ಲಾಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.ಬಂಧಿತ ಆರೋಪಿಗಳು ಸವಣೂರು ನಿವಾಸಿ ಝಾಕೀರ್(29) ಹಾಗೂ ಬೆಳ್ಳಾರೆ ನಿವಾಸಿ ಶಫೀಕ್(27) ಬಂಧಿತರು. ಪೊಲೀಸರು 6 ತಂಡಗಳನ್ನು ರಚಿಸಿ ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದರು.
ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ | ಬಂಧಿತರ ಶಫೀಕ್(27) ಬೆಳ್ಳಾರೆ ಹಾಗೂ ಝಾಕಿರ್(29) ಸವಣೂರು. | ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಹೇಳಿಕೆ|
Advertisement— theruralmirror (@ruralmirror) July 28, 2022
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಇಂದು ಮದ್ಯಾಹ್ನ ತುರ್ತು ಸಭೆ ನಡೆಸಿದ್ದಾರೆ. ಪಶ್ಚಿಮ ವಲಯ ಐಜಿ ದೇಚಜ್ಯೋತಿ ರೇ, ಎಸ್ಪಿ ಋಷಿಕೇಶ್ ಸೋನಾವಣೆ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರವೀಣ್ ನೆಟ್ಟಾರು ನಡೆಸುತ್ತಿದ್ದ ಅಕ್ಷಯ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಮಧು ರಾಯನ್ ದೂರಿನ ಮೇರೆ ಅಪರಿಚಿತ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.