ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ | ಇಬ್ಬರ ಬಂಧನ | ಇದುವರೆಗೆ 21 ಜನರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು |

July 28, 2022
1:28 PM

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ ಜಿಲ್ಲಾಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.ಬಂಧಿತ ಆರೋಪಿಗಳು  ಸವಣೂರು ನಿವಾಸಿ ಝಾಕೀರ್(29) ಹಾಗೂ ಬೆಳ್ಳಾರೆ ನಿವಾಸಿ ಶಫೀಕ್(27) ಬಂಧಿತರು. ಪೊಲೀಸರು 6 ತಂಡಗಳನ್ನು ರಚಿಸಿ ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದರು.


ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಐಡಿಜಿಪಿ ಅಲೋಕ್ ಕುಮಾರ್ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಇಂದು ಮದ್ಯಾಹ್ನ ತುರ್ತು ಸಭೆ ನಡೆಸಿದ್ದಾರೆ. ಪಶ್ಚಿಮ ವಲಯ ಐಜಿ ದೇಚಜ್ಯೋತಿ ರೇ, ಎಸ್ಪಿ ಋಷಿಕೇಶ್ ಸೋನಾವಣೆ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರವೀಣ್‌ ನೆಟ್ಟಾರು ನಡೆಸುತ್ತಿದ್ದ ಅಕ್ಷಯ ಚಿಕನ್‌ ಸೆಂಟರ್‌ ನಲ್ಲಿ ಕೆಲಸ ಮಾಡುತ್ತಿದ್ದ ಮಧು ರಾಯನ್‌ ದೂರಿನ ಮೇರೆ ಅಪರಿಚಿತ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror