ಬಿಜೆಪಿ ಯುವ ಮುಖಂಡ ಹತ್ಯೆ | ರಾಘವೇಶ್ವರ ಶ್ರೀ ಖಂಡನೆ |

July 28, 2022
10:24 PM

ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಘಟನೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.

Advertisement
Advertisement
Advertisement

ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯ ಎಲ್ಲರೂ ತಲೆ ತಗ್ಗಿಸುವ ವಿಚಾರ. ಸರ್ಕಾರ ತಕ್ಷಣ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಪ್ರವೀಣ್ ಸದಾ ಶ್ರೀಮಠದ ಜತೆ ಉತ್ತಮ ಸಂಪರ್ಕ ಹೊಂದಿದ್ದು, ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಸಾಮಾಜಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ಪಡೆಯುತ್ತಿದ್ದ. ಆತನ ಕುಟುಂಬದ ಜತೆ ಶ್ರೀಮಠ ಸದಾ ಇರುತ್ತದೆ ಎಂದು ಅಭಯ ನೀಡಿದ್ದಾರೆ.

Advertisement
ಪ್ರವೀಣ್ ಸಾವು ಸಮಾಜಕ್ಕೆ ತುಂಬಲಾರದ ನಷ್ಟ. ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಜನ ಶಾಂತಿಪ್ರಿಯರು. ಜನ ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ನ್ಯಾಯಕ್ಕಾಗಿ ನಡೆಸುವ ಹೋರಾಟ ಶಾಂತಿಯುತವಾಗಿರಲಿ ಎಂದು ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror