ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಘಟನೆಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.
ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯ ಎಲ್ಲರೂ ತಲೆ ತಗ್ಗಿಸುವ ವಿಚಾರ. ಸರ್ಕಾರ ತಕ್ಷಣ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಪ್ರವೀಣ್ ಸದಾ ಶ್ರೀಮಠದ ಜತೆ ಉತ್ತಮ ಸಂಪರ್ಕ ಹೊಂದಿದ್ದು, ಆಗಾಗ್ಗೆ ಶ್ರೀಮಠಕ್ಕೆ ಭೇಟಿ ನೀಡಿ ಸಾಮಾಜಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ಪಡೆಯುತ್ತಿದ್ದ. ಆತನ ಕುಟುಂಬದ ಜತೆ ಶ್ರೀಮಠ ಸದಾ ಇರುತ್ತದೆ ಎಂದು ಅಭಯ ನೀಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…