ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೆ ಇಬ್ಬರು ಆರೋಪಿಗಳ ಬಂಧನ | ಒಟ್ಟು ಬಂಧಿತರ ಸಂಖ್ಯೆ 6 |

ಪ್ರವೀಣ್‌ ನೆಟ್ಟಾರು
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರು ಸಂಖ್ಯೆ ಆರಕ್ಕೆ ಏರಿದೆ.‌

Advertisement

ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು, ತಲೆಮರೆಸಿಕೊಂಡವರಿಗಾಗಿ  ಶೋಧ ನಡೆಯುತ್ತಿದೆ. ಇಂದು ಬಂಧಿಸಿದ ಇಬ್ಬರು ಆರೋಪಿಗಳು ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement
Advertisement

Be the first to comment on "ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೆ ಇಬ್ಬರು ಆರೋಪಿಗಳ ಬಂಧನ | ಒಟ್ಟು ಬಂಧಿತರ ಸಂಖ್ಯೆ 6 |"

Leave a comment

Your email address will not be published.


*