ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತರು. ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರು ಸಂಖ್ಯೆ ಆರಕ್ಕೆ ಏರಿದೆ.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಎಲ್ಲಾ ಆರೋಪಿಗಳ ಮಾಹಿತಿ ದೊರೆತಿದ್ದು, ತಲೆಮರೆಸಿಕೊಂಡವರಿಗಾಗಿ ಶೋಧ ನಡೆಯುತ್ತಿದೆ. ಇಂದು ಬಂಧಿಸಿದ ಇಬ್ಬರು ಆರೋಪಿಗಳು ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.