ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತ, ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಳ್ಯದ ಜಟ್ಟಿಪಳ್ಳದ ಅಬ್ದುಲ್ ಕಬೀರ್ (33). ಈ ಪ್ರಕರಣದಲ್ಲಿ ಇದುವರೆಗೆ ಬಂಧಿಸಿದವರು ಸಂಖ್ಯೆ ಏಳಕ್ಕೆ ಏರಿದೆ. ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ, ಕಬೀರ್ ಹತ್ಯೆ ಪ್ರಕರಣದ ಯೋಜನೆಯಲ್ಲಿ ಭಾಗಿಯಾಗಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel