ಪ್ರವೀಣ್ ನೆಟ್ಟಾರು
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಬಂಧನ, ತನಿಖೆಯ ಹಾದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳೂ ಸುಳ್ಯ ಆಸುಪಾಸಿನವರೇ ಆಗಿದ್ದಾರೆ. ತನಿಖೆಯ ಹಾದಿ ತಪ್ಪಿಸಲು ಕೇರಳ ವಾಹನ ಬಳಕೆ, ಗಡಿಭಾಗದವರೆಗೆ ಹಂತಕರ ಬಿಟ್ಟಿರುವ ಬಗ್ಗೆ ಸುಳ್ಳು ಮಾಹಿತಿ, ಮಾಹಿತಿಯೇ ತಿಳಿದಿಲ್ಲ ಎಂಬ ತಪ್ಪು ಮಾಹಿತಿ ಇತ್ಯಾದಿಗಳ ಮೂಲಕ ಇಡೀ ಪ್ರಕರಣ ದಿಕ್ಕು ತಪ್ಪಿಸುವಂತೆ ಪ್ರಯತ್ನ ಮಾಡಲಾಗಿತ್ತು. ಆದರೆ ಪೊಲೀಸರು ತಮ್ಮ ಜಾಲದ ಮೂಲಕ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆಯೂ ಆ.10 ರಂದು ಬೆಳ್ಳಾರೆಯಲ್ಲಿ ನಡೆದಿತ್ತು. ಎನ್ ಐ ಎ ಕೂಡಾ ತನಿಖೆ ನಡೆಸುತ್ತಿದೆ. ಇಂದು ಎಸ್.ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಪ್ರಕರಣದ ಸಮಗ್ರವಾದ ಅಧಿಕೃತ ಮಾಹಿತಿ ಹೊರಬೀಳಲಿದೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…