ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ

Advertisement
Advertisement

ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು.

Advertisement

ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

Advertisement
Advertisement

ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ"

Leave a comment

Your email address will not be published.


*