ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು.
ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.
ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…