#HeavyRain | ಮಳೆಯಿಂದಾಗುವ ಅನಾಹುತ ತಪ್ಪಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮವಹಿಸಲು ಉಸ್ತುವಾರಿ ಸಚಿವರ ಸೂಚನೆ

July 7, 2023
6:59 PM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತವು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ವ್ಯಾಪಕ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಜನ, ಜಾನುವಾರುಗಳ ರಕ್ಷಣೆಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

Advertisement
Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮಳೆ ನೀರಿನಿಂದ ಅನಾಹುತ ಆಗುವ ತಗ್ಗು ಪ್ರದೇಶ, ಕೆರೆ, ನದಿ ತೀರಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಗತ್ಯ ಸೂಚನೆಗಳನ್ನು ನೀಡುವುದು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ವಿವತ್ತು ನಿರ್ವಹಣಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ತಿಳಿಸಿರುವ ಅವರು, ಈ ವಿಷಯದಲ್ಲಿ ಯಾವುದಾದರೂ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿಸಲಾಗುವುದು, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಳೆಯಿಂದ ಸಂಭವನೀಯ ಅನಾಹುತವಾಗುವ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ, ಅವರ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ನಿರ್ವಹಿಸಬೇಕು, ಈಗಾಗಲೇ ಸ್ಥಾಪಿಸಿರುವ ಕಾಳಜಿ ಕೇಂದ್ರಗಳನ್ನು ಮೇಲ್ವಿಚಾರಣೆ ನಡೆಸುವುದು, ಅವಶ್ಯವಿದ್ದಲ್ಲಿ ಮತ್ತಷ್ಟು ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸೇವೆ ಉಚಿತ ದೂರವಾಣಿ ಕರೆಯ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದು. ಪರಿಸ್ಥಿತಿಯನ್ನು ಅವಲೋಕಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡುವುದು. ನದಿ ಮತ್ತು ಸಮುದ್ರ ತೀರಕ್ಕೆ ಪ್ರವಾಸಿಗರು ತೆರಳದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು. ಪೊಲೀಸ್ ಇಲಾಖೆ, ಮೆಸ್ಕಾಂ, ಮೀನುಗಾರಿಕಾ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಣ್ಣ ನೀರಾವರಿ, ಪಂಚಾಯತ್‍ರಾಜ್, ಪಿಡಬ್ಲ್ಯೂಡಿ ಇತ್ಯಾದಿ ಇಲಾಖೆಗಳ ಜೊತೆ ನೇರ ಸಮನ್ವಯತೆಯನ್ನು ಸಾಧಿಸಿ ಮಳೆಯಿಂದ ಆಗಬಹುದಾದ ಸಂಭವನೀಯ ಹಾನಿಯನ್ನು ತಡೆಗಟ್ಟಲು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ನಿರ್ದೇಶನಗಳನ್ನು ಜಿಲ್ಲಾಡಳಿತವು ಚಾಚೂ ತಪ್ಪದೇ ಪಾಲಿಸಿ ಮಳೆಯಿಂದಾಗಿ ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ
May 21, 2025
10:31 PM
by: The Rural Mirror ಸುದ್ದಿಜಾಲ
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
May 21, 2025
10:25 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ
May 21, 2025
10:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group